LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Crime News

*ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ; ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳ ಬಂಧನ*

 

ಬೆಳಗಾವಿ : ನಗರದಲ್ಲಿ ಗಾಂಜಾ ಮಾರಾಟದಲ್ಲಿ ತೊಡಗಿದ್ದ ಮೂವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿ, ಅವರಿಂದ ಸುಮಾರು ₹1.80 ಲಕ್ಷ ಮೌಲ್ಯದ ಗಾಂಜಾ, ಮೊಬೈಲ್ ಹಾಗೂ ಬೈಕ್ ಅನ್ನು ವಶಪಡಿಸಿಕೊಂಡಿದ್ದಾರೆ.

ಬಂಧಿತ ಆರೋಪಿಗಳನ್ನು ಅಕ್ಷಯಕುಮಾರ ಸೋಮಶೇಖರ ಅಂಕಲಗಿ (20), ಆದರ್ಶ ಈರಯ್ಯ ಹಿರೇಮಠ (25) ಹಾಗೂ ಮಣಿಕಂಠ ರಾಚಯ್ಯಾ ಉಗರಖೋಡ (20) ಎಂದು ಗುರುತಿಸಲಾಗಿದೆ. ಬಂಧಿತರೆಲ್ಲರೂ ಕಿತ್ತೂರು ನಿವಾಸಿಗಳಾಗಿದ್ದಾರೆ.

ಪೊಲೀಸರ ಪ್ರಕಾರ, ಆರೋಪಿಗಳು ಬೆಳಗಾವಿಯ ನಿವಾಸಿಯಾಗಿರುವ ಮೈತಾಬ್ ಎಂಬಾತನಿಂದ ಗಾಂಜಾವನ್ನು ತಂದು ಸಾರ್ವಜನಿಕರಿಗೆ ಮಾರಾಟ ಮಾಡಲು ಯತ್ನಿಸುತ್ತಿದ್ದರು. ಬೆಳಗಾವಿ ನಗರದ ಯಡಿಯೂರಪ್ಪ ಮಾರ್ಗದ ಸಾಗರ ಕಿನಾರಾ ಧಾಬಾ ಸಮೀಪ ಬೈಕ್‌ನಲ್ಲಿ ಗಾಂಜಾವನ್ನು ಇಟ್ಟುಕೊಂಡು ಮಾರಾಟ ನಡೆಸುತ್ತಿದ್ದ ವೇಳೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.

ದಾಳಿಯ ವೇಳೆ ಆರೋಪಿಗಳಿಂದ 1 ಕೆಜಿ 100 ಗ್ರಾಂ ಗಾಂಜಾ, ವಿವೋ ಕಂಪನಿಯ ಮೊಬೈಲ್ ಫೋನ್ ಹಾಗೂ ಹೀರೋ ಎಕ್ಸ್‌ಟ್ರೀಮ್ ಬೈಕ್ ಸೇರಿದಂತೆ ಒಟ್ಟು ₹1.80 ಲಕ್ಷ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಸಿಸಿಬಿ ವಿಭಾಗದ ಪಿಐ ಮಂಜುನಾಥ ನಾಯಿಕ ಅವರ ನೇತೃತ್ವದಲ್ಲಿ ಪಿಎಸ್‌ಐ ಮಂಜುನಾಥ ಭಜಂತ್ರಿ ಹಾಗೂ ಸಿಬ್ಬಂದಿ ಈ ಕಾರ್ಯಾಚರಣೆ ನಡೆಸಿದರು.

ಈ ಸಂಬಂಧ ಶಹಾಪುರ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 124/2026 ಅಡಿಯಲ್ಲಿ ಎನ್‌ಡಿಪಿಎಸ್ ಕಾಯ್ದೆಯ ಕಲಂ 20(b)(ii)(B) ಪ್ರಕಾರ ಪ್ರಕರಣ ದಾಖಲಿಸಲಾಗಿದ್ದು, ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.

Author
D Media 24
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
*ಗೋವಾ ವಿಧಾನಸಭೆ ಚುನಾವಣೆ: AICC ಸಂಯೋಜಕರಾಗಿ ಮೃಣಾಲ್ ಹೆಬ್ಬಾಳಕರ್ ನೇಮಕ ಬೆಳಗಾವಿ ಯುವ ಮುಖಂಡನಿಗೆ ಕಾಂಗ್ರೆಸ್ ಹೈಕಮಾಂಡ್‌ನಿಂದ ಮಹತ್ವದ ಜವಾಬ್ದಾರಿ**ರಸ್ತೆ ಗುಂಡಿ ಮುಚ್ಚುವ ಕಾಮಗಾರಿಗೆ ವೇಗ: ಲಕ್ಷ್ಮೀ ಹೆಬ್ಬಾಳಕರ್ ಪರಿಶೀಲನೆ**ಅನಿಯಮಿತ ವಿದ್ಯುತ್ ಪೂರೈಕೆ ಖಂಡಿಸಿ ಬಿಜೆಪಿ ಪ್ರತಿಭಟನೆ; ಪಂತ ಬಾಳೇಕುಂದ್ರಿ ವಿದ್ಯುತ್ ಕೇಂದ್ರದ ಎದುರು ರಸ್ತೆ ತಡೆ**₹65 ಲಕ್ಷ ವೆಚ್ಚದಲ್ಲಿ ಶ್ರೀ ವಿಠ್ಠಲ ರುಕ್ಮಾಯಿ ಮಂದಿರ ನಿರ್ಮಾಣ ಸ್ಲ್ಯಾಬ್ ಕಾಮಗಾರಿಗೆ ಮೃಣಾಲ್ ಹೆಬ್ಬಾಳಕರ್ ಸೇರಿ ಗಣ್ಯರಿಂದ ಪೂಜೆ**ಗಣೇಶೋತ್ಸವದಲ್ಲಿ ಅಂಗಡಿಗಳನ್ನು ರಾತ್ರಿ 12 ಗಂಟೆಯವರೆಗೆ ತೆರೆಯಲು ಅನುಮತಿ**ಬೆಳಗಾವಿ ಕಾಂಗ್ರೆಸ್‌ನಲ್ಲಿ ಮಹತ್ವದ ಸಂಘಟನಾತ್ಮಕ ಬದಲಾವಣೆ; ಗ್ರಾಮೀಣ ಅಧ್ಯಕ್ಷರಾಗಿ ಬಸವರಾಜ ಶೇಡಗಾವಿ, ನಗರ ಸಾರಥ್ಯ ರಾಜಾ ಸಲೀಂಗೆ**ರೋಟರಿ ಕ್ಲಬ್ ಆಫ್ ಬೆಳಗಾವಿ ದರ್ಪಣದಿಂದ ‘ಗುರು ಗೌರವ’; ಆರ್ಥಿಕ ಸಾಕ್ಷರತೆ, ಆರೋಗ್ಯ ಜಾಗೃತಿ ಕಾರ್ಯಕ್ರಮ**ಉದ್ಯಮಬಾಗ್ ಪೊಲೀಸರ ಭರ್ಜರಿ ಕಾರ್ಯಾಚರಣೆ; ವಾಹನ ಕಳ್ಳತನ ಪ್ರಕರಣದ ಆರೋಪಿ ಬಂಧನ, ₹2.65 ಲಕ್ಷ ಮೌಲ್ಯದ ವಾಹನ ಜಪ್ತಿ**ಇಡಿ ಕ್ರಮ ಖಂಡಿಸಿ ಹಿರೇಬಾಗೇವಾಡಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ; ಪರಶುರಾಮ್ ಪೂಜಾರಿ ನೇತೃತ್ವದಲ್ಲಿ ಧರಣಿ**ಇಡಿ ಶೋಧ ಪೂರ್ಣ; ಸತೀಶ್ ಜಾರಕಿಹೊಳಿ ಬೆಂಬಲಿಗರ ನಡುವೆ ಕಾಣಿಸಿಕೊಂಡರು; ಘೋಷಣೆಗಳಿಂದ ಮೊಳಗಿದ ಪರಿಸರ*