LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Local News

*ಸಚಿವ ಸ್ಥಾನ ನೀಡುವಂತೆ ಆಗ್ರಹ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಬಲಿಗರಿಂದ ಅರೆಬೆತ್ತಲೆ ಪ್ರತಿಭಟನೆ*

ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಸಚಿವ ಸ್ಥಾನ ನೀಡದಿರುವುದನ್ನು ಖಂಡಿಸಿ ಅವರ ಬೆಂಬಲಿಗರು ಅರೆಬೆತ್ತಲೆ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಬೆಳಗಾವಿ ತಾಲ್ಲೂಕಿನ ಬಡಸ ಕೆ.ಎಚ್. ಕ್ರಾಸ್ ಬಳಿ ಪ್ರತಿಭಟನೆ ಮುಂದುವರಿದಿದ್ದು, ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಸಚಿವ ಸಂಪುಟಕ್ಕೆ ಸೇರ್ಪಡೆಗೊಳಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಲಕ್ಷ್ಮೀ ಹೆಬ್ಬಾಳ್ಕರ್ ಅವರು ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಪಕ್ಷ ಸಂಘಟನೆ ಹಾಗೂ ಅಭಿವೃದ್ಧಿ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಇಂತಹ ನಾಯಕಿಗೆ ಸಚಿವ ಸ್ಥಾನ ನೀಡದೇ ಇರುವುದು ಅವರ ಬೆಂಬಲಿಗರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ ಎಂದು ಪ್ರತಿಭಟನಾಕಾರರು ಹೇಳಿದರು.

ಈ ಹಿನ್ನೆಲೆಯಲ್ಲಿ ರೊಚ್ಚಿಗೆದ್ದ ಬೆಂಬಲಿಗರು ಅರೆಬೆತ್ತಲೆ ಪ್ರತಿಭಟನೆ ನಡೆಸಿ ಸರ್ಕಾರ ಹಾಗೂ ಕಾಂಗ್ರೆಸ್ ಪಕ್ಷದ ನಾಯಕತ್ವದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಬೆಳಗಾವಿ ಕಾಂಗ್ರೆಸ್‌ನ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿ ಮನ್ಸೂರ್ ಅಲಿ ಅತ್ತಾರ, ಅಶೋಕ್ ಅಂಗಡಿ, ಪರ್ವತ ಗೌಡ ಪಾಟೀಲ್, ರವಿ ಮೇಳೇದ್, ಪ್ರಕಾಶ್ ಪಾಟೀಲ್, ಬಸವಂತ ನಾಯಕ್ ಸೇರಿದಂತೆ ವಿವಿಧ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬೆಂಬಲಿಗರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಸಚಿವ ಸ್ಥಾನ ನೀಡುವ ಮೂಲಕ ಅವರ ರಾಜಕೀಯ ಹಾಗೂ ಸಂಘಟನಾ ಸಾಮರ್ಥ್ಯಕ್ಕೆ ಸೂಕ್ತ ಮನ್ನಣೆ ನೀಡಬೇಕು. ಇಲ್ಲದಿದ್ದರೆ ಪ್ರತಿಭಟನೆ ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.

Author
D Media 24
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
*ಗೋವಾ ವಿಧಾನಸಭೆ ಚುನಾವಣೆ: AICC ಸಂಯೋಜಕರಾಗಿ ಮೃಣಾಲ್ ಹೆಬ್ಬಾಳಕರ್ ನೇಮಕ ಬೆಳಗಾವಿ ಯುವ ಮುಖಂಡನಿಗೆ ಕಾಂಗ್ರೆಸ್ ಹೈಕಮಾಂಡ್‌ನಿಂದ ಮಹತ್ವದ ಜವಾಬ್ದಾರಿ**ರಸ್ತೆ ಗುಂಡಿ ಮುಚ್ಚುವ ಕಾಮಗಾರಿಗೆ ವೇಗ: ಲಕ್ಷ್ಮೀ ಹೆಬ್ಬಾಳಕರ್ ಪರಿಶೀಲನೆ**ಅನಿಯಮಿತ ವಿದ್ಯುತ್ ಪೂರೈಕೆ ಖಂಡಿಸಿ ಬಿಜೆಪಿ ಪ್ರತಿಭಟನೆ; ಪಂತ ಬಾಳೇಕುಂದ್ರಿ ವಿದ್ಯುತ್ ಕೇಂದ್ರದ ಎದುರು ರಸ್ತೆ ತಡೆ**₹65 ಲಕ್ಷ ವೆಚ್ಚದಲ್ಲಿ ಶ್ರೀ ವಿಠ್ಠಲ ರುಕ್ಮಾಯಿ ಮಂದಿರ ನಿರ್ಮಾಣ ಸ್ಲ್ಯಾಬ್ ಕಾಮಗಾರಿಗೆ ಮೃಣಾಲ್ ಹೆಬ್ಬಾಳಕರ್ ಸೇರಿ ಗಣ್ಯರಿಂದ ಪೂಜೆ**ಗಣೇಶೋತ್ಸವದಲ್ಲಿ ಅಂಗಡಿಗಳನ್ನು ರಾತ್ರಿ 12 ಗಂಟೆಯವರೆಗೆ ತೆರೆಯಲು ಅನುಮತಿ**ಬೆಳಗಾವಿ ಕಾಂಗ್ರೆಸ್‌ನಲ್ಲಿ ಮಹತ್ವದ ಸಂಘಟನಾತ್ಮಕ ಬದಲಾವಣೆ; ಗ್ರಾಮೀಣ ಅಧ್ಯಕ್ಷರಾಗಿ ಬಸವರಾಜ ಶೇಡಗಾವಿ, ನಗರ ಸಾರಥ್ಯ ರಾಜಾ ಸಲೀಂಗೆ**ರೋಟರಿ ಕ್ಲಬ್ ಆಫ್ ಬೆಳಗಾವಿ ದರ್ಪಣದಿಂದ ‘ಗುರು ಗೌರವ’; ಆರ್ಥಿಕ ಸಾಕ್ಷರತೆ, ಆರೋಗ್ಯ ಜಾಗೃತಿ ಕಾರ್ಯಕ್ರಮ**ಉದ್ಯಮಬಾಗ್ ಪೊಲೀಸರ ಭರ್ಜರಿ ಕಾರ್ಯಾಚರಣೆ; ವಾಹನ ಕಳ್ಳತನ ಪ್ರಕರಣದ ಆರೋಪಿ ಬಂಧನ, ₹2.65 ಲಕ್ಷ ಮೌಲ್ಯದ ವಾಹನ ಜಪ್ತಿ**ಇಡಿ ಕ್ರಮ ಖಂಡಿಸಿ ಹಿರೇಬಾಗೇವಾಡಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ; ಪರಶುರಾಮ್ ಪೂಜಾರಿ ನೇತೃತ್ವದಲ್ಲಿ ಧರಣಿ**ಇಡಿ ಶೋಧ ಪೂರ್ಣ; ಸತೀಶ್ ಜಾರಕಿಹೊಳಿ ಬೆಂಬಲಿಗರ ನಡುವೆ ಕಾಣಿಸಿಕೊಂಡರು; ಘೋಷಣೆಗಳಿಂದ ಮೊಳಗಿದ ಪರಿಸರ*