LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Local News

*ರಸ್ತೆ ಗುಂಡಿ ಮುಚ್ಚುವ ಕಾಮಗಾರಿಗೆ ವೇಗ: ಲಕ್ಷ್ಮೀ ಹೆಬ್ಬಾಳಕರ್ ಪರಿಶೀಲನೆ*


ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆ ಹಾಗೂ ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಸಾರ್ವಜನಿಕರ ಸುಗಮ ಮತ್ತು ಸುರಕ್ಷಿತ ಸಂಚಾರಕ್ಕೆ ಅನುಕೂಲವಾಗುವಂತೆ ಕೈಗೊಳ್ಳಲಾಗುತ್ತಿರುವ ರಸ್ತೆ ಗುಂಡಿ ಮುಚ್ಚುವ ಕಾಮಗಾರಿಗಳ ಪ್ರಗತಿಯನ್ನು ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರು ಶನಿವಾರ ಪರಿಶೀಲಿಸಿದರು.
ನಗರದ ವಿವಿಧ ಪ್ರಮುಖ ರಸ್ತೆ ಹಾಗೂ ಬಡಾವಣೆಗಳಿಗೆ ಭೇಟಿ ನೀಡಿದ ಅವರು, ರಸ್ತೆಗಳಲ್ಲಿ ಉಂಟಾಗಿರುವ ಗುಂಡಿಗಳಿಂದ ವಾಹನ ಸವಾರರು ಹಾಗೂ ಸಾರ್ವಜನಿಕರಿಗೆ ಎದುರಾಗುತ್ತಿರುವ ತೊಂದರೆಗಳನ್ನು ಪರಿಶೀಲಿಸಿದರು.

ಮಳೆ ಸೇರಿದಂತೆ ವಿವಿಧ ಕಾರಣಗಳಿಂದ ರಸ್ತೆಗಳ ಸ್ಥಿತಿ ಹದಗೆಟ್ಟಿರುವ ಕಡೆಗಳಲ್ಲಿ ದುರಸ್ತಿ ಕಾಮಗಾರಿಗಳನ್ನು ತ್ವರಿತವಾಗಿ ಕೈಗೊಂಡು, ಸಾರ್ವಜನಿಕರಿಗೆ ಯಾವುದೇ ರೀತಿಯ ಅನಾನುಕೂಲವಾಗದಂತೆ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.


ಸಹ್ಯಾದ್ರಿ ನಗರ ಹಾಗೂ ಕುವೆಂಪು ನಗರದ ಪ್ರಮುಖ ರಸ್ತೆಗಳಲ್ಲಿ ನಡೆಯುತ್ತಿರುವ ಗುಂಡಿ ಮುಚ್ಚುವ ಕಾಮಗಾರಿಗಳನ್ನು ಪರಿಶೀಲಿಸಿದ ಲಕ್ಷ್ಮೀ ಹೆಬ್ಬಾಳಕರ್ ಅವರು, ಕಾಮಗಾರಿಯ ಗುಣಮಟ್ಟದ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.

 ರಸ್ತೆ ದುರಸ್ತಿ ಕಾರ್ಯದಲ್ಲಿ ಗುಣಮಟ್ಟದ ಸಾಮಗ್ರಿಗಳನ್ನು ಬಳಸಬೇಕು ಹಾಗೂ ಕೈಗೊಂಡಿರುವ ಕಾಮಗಾರಿಗಳು ದೀರ್ಘಕಾಲ ಬಾಳಿಕೆ ಬರುವಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.


ಇದೇ ವೇಳೆ ರಾಮನಗರ, ಜ್ಯೋತಿ ನಗರ, ಜಯನಗರ, ಮುಸ್ತಫಾ ಕಾಲೋನಿ, ಶಾಹುನಗರ ಬಸ್ ನಿಲ್ದಾಣ ಹಾಗೂ ಕಲ್ಮೇಶ್ವರ ನಗರ ಪ್ರದೇಶಗಳಲ್ಲಿಯೂ ರಸ್ತೆ ಗುಂಡಿ ಮುಚ್ಚುವ ಕಾಮಗಾರಿಗಳ ಪ್ರಗತಿಯನ್ನು ಪರಿಶೀಲಿಸಲಾಯಿತು.


ಜನರು ಪ್ರತಿನಿತ್ಯ ಸಂಚರಿಸುವ ಪ್ರಮುಖ ರಸ್ತೆಗಳು ಹಾಗೂ ವಸತಿ ಪ್ರದೇಶಗಳ ರಸ್ತೆಗಳಲ್ಲಿ ಗುಂಡಿಗಳಿಂದಾಗಿ ವಾಹನ ಸವಾರರಿಗೆ ತೊಂದರೆಯಾಗದಂತೆ ಆದ್ಯತೆಯ ಮೇರೆಗೆ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು.

 ಸಾರ್ವಜನಿಕರ ಸುರಕ್ಷತೆ ದೃಷ್ಟಿಯಿಂದ ಯಾವುದೇ ವಿಳಂಬಕ್ಕೆ ಅವಕಾಶ ನೀಡಬಾರದು ಎಂದು ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.


ನಗರದ ಪ್ರಮುಖ ರಸ್ತೆಗಳು, ಬಡಾವಣೆಗಳ ಸಂಪರ್ಕ ರಸ್ತೆಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಬಳಸುವ ಮಾರ್ಗಗಳ ನಿರ್ವಹಣೆಗೆ ವಿಶೇಷ ಗಮನ ಹರಿಸುವಂತೆ ತಿಳಿಸಿದ ಅವರು, ಕಾಮಗಾರಿ ಪೂರ್ಣಗೊಂಡ ನಂತರವೂ ರಸ್ತೆ ಗುಣಮಟ್ಟವನ್ನು ಪರಿಶೀಲಿಸಿ, ಅಗತ್ಯವಿದ್ದಲ್ಲಿ ದುರಸ್ತಿ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.


ಜನರ ಸುಗಮ ಸಂಚಾರ, ರಸ್ತೆ ಸುರಕ್ಷತೆ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದ್ದು, ಸಾರ್ವಜನಿಕರಿಗೆ ಅನುಕೂಲವಾಗುವ ರೀತಿಯಲ್ಲಿ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಲಾಗುವುದು ಎಂದು ಈ ಸಂದರ್ಭದಲ್ಲಿ ತಿಳಿಸಲಾಯಿತು.


ಈ ಸಂದರ್ಭದಲ್ಲಿ ಬೆಳಗಾವಿ ಮಹಾನಗರ ಪಾಲಿಕೆ ಆಯುಕ್ತ ಕಾರ್ತಿಕ್ ಎಂ., ವಾರ್ಡ್ ನಂ.31ರ ನಗರ ಸೇವಕಿ ವೀಣಾ ವಿಜಾಪುರೆ, ಮಹಾನಗರ ಪಾಲಿಕೆಯ ಸಹಾಯಕ ಅಭಿಯಂತರ ಜಗದೀಶ್ ಎಸ್., ಕಿರಿಯ ಅಭಿಯಂತರ ಅಕ್ಷತಾ ಸೇರಿದಂತೆ ಪಾಲಿಕೆ ಅಧಿಕಾರಿಗಳು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

Author
D Media 24
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
*ಗೋವಾ ವಿಧಾನಸಭೆ ಚುನಾವಣೆ: AICC ಸಂಯೋಜಕರಾಗಿ ಮೃಣಾಲ್ ಹೆಬ್ಬಾಳಕರ್ ನೇಮಕ ಬೆಳಗಾವಿ ಯುವ ಮುಖಂಡನಿಗೆ ಕಾಂಗ್ರೆಸ್ ಹೈಕಮಾಂಡ್‌ನಿಂದ ಮಹತ್ವದ ಜವಾಬ್ದಾರಿ**ರಸ್ತೆ ಗುಂಡಿ ಮುಚ್ಚುವ ಕಾಮಗಾರಿಗೆ ವೇಗ: ಲಕ್ಷ್ಮೀ ಹೆಬ್ಬಾಳಕರ್ ಪರಿಶೀಲನೆ**ಅನಿಯಮಿತ ವಿದ್ಯುತ್ ಪೂರೈಕೆ ಖಂಡಿಸಿ ಬಿಜೆಪಿ ಪ್ರತಿಭಟನೆ; ಪಂತ ಬಾಳೇಕುಂದ್ರಿ ವಿದ್ಯುತ್ ಕೇಂದ್ರದ ಎದುರು ರಸ್ತೆ ತಡೆ**₹65 ಲಕ್ಷ ವೆಚ್ಚದಲ್ಲಿ ಶ್ರೀ ವಿಠ್ಠಲ ರುಕ್ಮಾಯಿ ಮಂದಿರ ನಿರ್ಮಾಣ ಸ್ಲ್ಯಾಬ್ ಕಾಮಗಾರಿಗೆ ಮೃಣಾಲ್ ಹೆಬ್ಬಾಳಕರ್ ಸೇರಿ ಗಣ್ಯರಿಂದ ಪೂಜೆ**ಗಣೇಶೋತ್ಸವದಲ್ಲಿ ಅಂಗಡಿಗಳನ್ನು ರಾತ್ರಿ 12 ಗಂಟೆಯವರೆಗೆ ತೆರೆಯಲು ಅನುಮತಿ**ಬೆಳಗಾವಿ ಕಾಂಗ್ರೆಸ್‌ನಲ್ಲಿ ಮಹತ್ವದ ಸಂಘಟನಾತ್ಮಕ ಬದಲಾವಣೆ; ಗ್ರಾಮೀಣ ಅಧ್ಯಕ್ಷರಾಗಿ ಬಸವರಾಜ ಶೇಡಗಾವಿ, ನಗರ ಸಾರಥ್ಯ ರಾಜಾ ಸಲೀಂಗೆ**ರೋಟರಿ ಕ್ಲಬ್ ಆಫ್ ಬೆಳಗಾವಿ ದರ್ಪಣದಿಂದ ‘ಗುರು ಗೌರವ’; ಆರ್ಥಿಕ ಸಾಕ್ಷರತೆ, ಆರೋಗ್ಯ ಜಾಗೃತಿ ಕಾರ್ಯಕ್ರಮ**ಉದ್ಯಮಬಾಗ್ ಪೊಲೀಸರ ಭರ್ಜರಿ ಕಾರ್ಯಾಚರಣೆ; ವಾಹನ ಕಳ್ಳತನ ಪ್ರಕರಣದ ಆರೋಪಿ ಬಂಧನ, ₹2.65 ಲಕ್ಷ ಮೌಲ್ಯದ ವಾಹನ ಜಪ್ತಿ**ಇಡಿ ಕ್ರಮ ಖಂಡಿಸಿ ಹಿರೇಬಾಗೇವಾಡಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ; ಪರಶುರಾಮ್ ಪೂಜಾರಿ ನೇತೃತ್ವದಲ್ಲಿ ಧರಣಿ**ಇಡಿ ಶೋಧ ಪೂರ್ಣ; ಸತೀಶ್ ಜಾರಕಿಹೊಳಿ ಬೆಂಬಲಿಗರ ನಡುವೆ ಕಾಣಿಸಿಕೊಂಡರು; ಘೋಷಣೆಗಳಿಂದ ಮೊಳಗಿದ ಪರಿಸರ*